Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೇಂದ್ರ ಬಜೆಟ್ | ಬಿಹಾರ ರಸ್ತೆಗಳ ಅಭಿವೃದ್ದಿಗೆ ₹26,000 ಕೋಟಿ ಅನುದಾನ ಘೋ‍ಷಣೆ

ಮೂರನೇ ಅವಧಿಗೆ ಸರ್ಕಾರ ರಚಿಸಿರುವ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೊದಲ ಬಜೆಟ್‌ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸುತ್ತಿದ್ದಾರೆ. ಬಜೆಟ್‌ನಲ್ಲಿ ಎನ್‌ಡಿಎ ಸರ್ಕಾರದ ಕಿಂಗ್‌ಮೇಕರ್ ಆಗಿರುವ ಮೈತ್ರಿ ಪಕ್ಷ ಜೆಡಿಯು ಅಧಿಕಾರದಲ್ಲಿರುವ ಬಿಹಾರದ ರಸ್ತೆ ಕಾಮಗಾರಿಗಳಿಗಾಗಿ 26,000 ಕೋಟಿ ರೂ.ಗಳನ್ನು ನೀಡಲಾಗಿದೆ. ಜೊತೆಗೆ, ಹೊಸ ವಿಮಾನ ನಿಲ್ದಾಣಗಳಿಗೂ ಅನುದಾನ ಮಂಜೂರು ಮಾಡಲಾಗಿದೆ.

ಎನ್‌ಡಿಎಯ ಮತ್ತೊಬ್ಬ ಕಿಂಗ್‌ಮೇಕರ್ ಎನ್ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಅಧಿಕಾರದಲ್ಲಿರುವ ಆಂಧ್ರಪ್ರದೇಶಕ್ಕೂ ವಿಶೇಷ ಯೋಜನೆಗಳನ್ನು ನೀಡಲಾಗುತ್ತಿದೆ. ವಿಶೇಷ ಕಾರಿಡಾರ್ ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ.

ಇನ್ನು, ಪ್ರಮುಖ ಕ್ಷೇತ್ರಗಳಾದ ಶಿಕ್ಷಣ, ಉದ್ಯೋಗ ಹಾಗೂ ಕೌಶಲ್ಯಾಭಿವೃದ್ಧಿ ವಲಯಕ್ಕೆ 1.48 ಲಕ್ಷ ಕೋಟಿ ರೂ. ಮೀಸಲಿಟ್ಟಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಪ್ರತಿ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ 3% ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಕಾಗುತ್ತದೆ. ದೇಶೀಯ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಪಡೆಯಲು 10 ಲಕ್ಷ ರೂ.ವರೆಗೆ ಕಲಿಕಾ ಸಾಲ ಸೌಲಭ್ಯ ನೀಡುವುದಾಗಿ ಬಜೆಟ್‌ನಲ್ಲಿ ಸಚಿವರು ಹೇಳಿದ್ದಾರೆ.

ದೇಶದಲ್ಲಿ 12 ಹೊಸ ಇಂಡಸ್ಟ್ರಿಯಲ್​ ಪಾರ್ಕ್​​ಗಳನ್ನು ನಿರ್ಮಾಣ ಮಾಡಲಾಗುವುದು. ಕೈಗಾರಿಕೆಗಳಲ್ಲಿ ಇಂಟರ್ನಶಿಪ್​ ಮಾಡುವವರಿಗೆ 5 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಮುದ್ರಾ ಯೋಜನೆಯಡಿ ಸಾಲದ ಮೊತ್ತವನ್ನು 10 ಲಕ್ಷ ರೂ.ನಿಂದ 20 ಲಕ್ಷ ರೂ.ಗಳಿಗೆ ಹೆಚ್ಚಿಸಲು ನಿರ್ಧಾರಿಸಲಾಗಿದೆ. ದೇಶಾದ್ಯಂತ 26 ಸಾವಿರ ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಯೋಜನೆಯನ್ನು ಅಭಿವೃದ್ಧಿ ಮತ್ತು ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!